ಮೊರಾರ್ಜಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಕ.ಪ್ರ. ವಾರ್ತೆ ್ಣ ತುಮಕೂರು ್ಣ ಮಾ.21
ಮಧುಗಿರಿ ತಾಲೂಕು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿ ಸಿ.ಬಿ.ಮುದ್ದುಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ ಬೆಳೆಸಿಕೊಂಡು ಪರೀಕ್ಷೆಯತ್ತ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ.ಸಿ.ಬಸವರಾಜ್ ಮಾತನಾಡಿ, ಮುಂದಿನ ಭವಿಷ್ಯಕ್ಕೆ ಇಂದಿನಿಂದ ಒಳ್ಳೆಯ ಬುನಾದಿ ಹಾಕಿಕೊಳ್ಳಬೇಕು. ಯುವಜನತೆ ದಾರಿ ತಪ್ಪಿದರೆ ದೇಶಕ್ಕೆ ಆಪತ್ತು ಎಂಬುದನ್ನು ಮನದಟ್ಟು ಮಾಡಿಕೊಟ್ಟರು.
ನಿವೃತ್ತ ಉಪನಿರ್ದೇಶಕ ಪಿ.ಹುಚ್ಚಯ್ಯ ಮಾತನಾಡಿದರು. ಕೆ.ಎಸ್.ಈರಣ್ಣ, ತಿಮ್ಮರಾಯಪ್ಪ ಮತ್ತು ಡಿ.ನಾಗರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.