ಶ್ರೀನಿವಾಸಪುರದಲ್ಲೂ ಪ್ರತಿಭಟನೆ
ಶ್ರೀನಿವಾಸಪುರ: ರಾಜ್ಯದ 13 ವಿಶ್ವವಿದ್ಯಾನಿಲಯಗಳನ್ನು ಖಾಸಗಿಕರಣಗೊಳಿಸಲು ರಾಜ್ಯ ಸರ್ಕಾರ ಅನುಮತಿ ನೀಡಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿ ತಾಲೂಕು ಎಸ್ಎಫ್ಐ ಘಟಕ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಹ ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಬದಲಾವಣೆ ತಂದು ಬಡ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ನಾನಾ ರೀತಿಯಲ್ಲಿ ತೊಂದರೆ ಮಾಡುವುದನ್ನು ಬಿಟ್ಟರೆ ಒಳ್ಳೆಯ ಶಿಕ್ಷಣ ನೀಡುವ ಬಗ್ಗೆ ಚಿಂತನೆಯನ್ನೇ ನಡೆಸಲಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎಸ್ಎಫ್ಐ ಮುಖಂಡರೊಂದಿಗೆ ಬೀದಿಗಿಳಿದು ಪ್ರತಿಭಟನೆ ನಡೆಸಿ, ನಂತರ ತಾಲೂಕು ದಂಡಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.