ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸಂಪನ್ಮೂಲ ವ್ಯಕ್ತಿಗಳಿಗೆ ಸನ್ಮಾನ

Parashurama
Updated On : 21 Mar 2013, 10:39 am

ಕ.ಪ್ರ. ವಾರ್ತೆ ್ಣ ತುಮಕೂರು ್ಣ ಮಾ.21
ಇಲ್ಲಿನ ಆರ್.ವಿ. ಅಧ್ಯಯನ ಕೇಂದ್ರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ ಅಂಗವಾಗಿ ಸತತ ಒಂದು ತಿಂಗಳ ಉಪನ್ಯಾಸ ನೀಡಿದ ಸಂಪನ್ಮೂಲ ವ್ಯಕ್ತಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಆರ್. ಶ್ರೀರಂಗಪ್ಪ ಅವರು ನಿರಂತರ ಅಧ್ಯಯನದಿಂದ ಏನನ್ನಾದರೂ ಸಾಧಿಸಬಹುದು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿ.ಹನುಮಂತಯ್ಯ ಅವರು ಹಿಂದೆ ಯಾವುದೇ ಸೌಕರ್ಯವಿಲ್ಲದೆ, ಮಾರ್ಗದರ್ಶನವಿಲ್ಲದೆ ಬೀದಿದೀಪಗಳಡಿ ಕುಳಿತು ಓದಿದ ಎಷ್ಟೋ ಮಂದಿ ನಮ್ಮ ಕಣ್ಣ ಮುಂದೆ ಇದ್ದಾರೆ. ಆದರೆ, ಇಂದಿನ ವಿದ್ಯಾರ್ಥಿಗಳು ವಿಲಾಸದಲ್ಲಿ ಬದುಕನ್ನು ಸವೆಸುತ್ತಿದ್ದು ಇದು ವಿಷಾದನೀಯ ಎಂದರು.
ವಿದ್ಯಾರ್ಥಿಗಳು ತಮ್ಮ ವೈಭವದ ವಿಲಾಸಿ ಜೀವನಕ್ಕೆ ಕ್ಷಣ ಹೊತ್ತು ಬಿಡುವು ನೀಡಿ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು. ಇಂದು ಯಾವುದೇ ಕ್ಷೇತ್ರಕ್ಕೆ ಹೋದರೂ ಸ್ಪರ್ಧಾತ್ಮಕ ಪರೀಕ್ಷೆ ಅಂಕಗಳೇ ನಿರ್ಣಾಯಕ. ಆದ್ದರಿಂದ ಪ್ರತಿದಿನ ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments