'ಸ್ಥಳೀಯರಿಗೆ ಆದ್ಯತೆ ನೀಡಿ'
ತುಮಕೂರು: ಚಿಕ್ಕನಾಯಕನಹಳ್ಳಿ ವಿಧಾನಸಭೆ ಚುನಾವಣೆಗೆ ಈ ಬಾರಿ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಬಸವರಾಜ್ ಆಗ್ರಹಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದ್ದರಿಂದ ಆ ಅಭ್ಯರ್ಥಿ ಕೇವಲ 3800 ಮತಗಳನ್ನಷ್ಟೆ ಪಡೆದು ಠೇವಣಿ ಕಳೆದುಕೊಂಡಿದ್ದರು.
ಈ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಯಾವುದೇ ಜಾತಿಯ ವ್ಯಕ್ತಿಗೆ ಟಿಕೆಟ್ ನೀಡಿದರು ಎಲ್ಲಾ ಜಾತಿ ಸಮುದಾಯಗಳು ಬೆಂಬಲಿಸುವ ವಾತಾವರಣವಿದೆ ಎಂದಿದ್ದಾರೆ. ಒಂದು ವೇಳೆ ಹೈಕಮಾಂಡ್ ಹೊರಗಿನವರಿಗೆ ಟಿಕೆಟ್ ನೀಡಿದರೆ ಎಲ್ಲಾ ಜಾತಿ, ಜನಾಂಗಗಳೂ ಒಟ್ಟಾಗಿ ವಿರೋಧಿಸುವ ಸಾಧ್ಯತೆ ಇದೆ ಎಂದು ಬಸವರಾಜ್ ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.