ಇಂದು ವಿವಿಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಹಾಗೂ ಮಹಾಬೋಧಿ ಸೊಸೈಟಿ, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಾ. 26 ರಂದು ಸಮಕಾಲೀನ ಜಗತ್ತಿಗೆ ಬುದ್ಧನ ಬೋಧನೆಗಳು ಎಂಬ ಅಂತಾರಾಷ್ಟ್ರೀಯ ಸಮ್ಮೇಳನವನ್ನು ತುಮಕೂರು ವಿ.ವಿ.ಯಲ್ಲಿ ಹಮ್ಮಿಕೊಳ್ಳಲಾಗಿದೆ. ಭಗವಾನ್ ಬುದ್ಧ ಯೂನಿವರ್ಸಿಟಿ ಆಫ್ ಪಾಲಿ ಅಂಡ್ ತೆರವಾಡ ಬುದ್ಧಿಸಂನ ರೆಕ್ಟರ್ ಹಾಗೂ ಮಹಾಬೋಧಿ ಸೊಸೈಟಿಯ ಸ್ಥಾಪಕ ಅಧ್ಯಕ್ಷ ಆಚಾರ್ಯ ಬುದ್ಧರಖ್ಖಿತ ಅವರು ಸಮ್ಮೇಳನವನ್ನು ಬೆಳಗ್ಗೆ 10 ಕ್ಕೆ ವಿ.ವಿ.ಯ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಉದ್ಘಾಟಿಸಲಿದ್ದಾರೆ.
ಲೇಹ್-ಲಡಾಖ್ನ ಮಹಾಬೋಧಿ ಇಂಟರ್ನ್ಯಾಷನಲ್ ಮೆಡಿಟೇಶನ್ ಸೆಂಟರ್ನ ಅಧ್ಯಕ್ಷ ಡಾ. ಸಂಗಸೇನ ಮಹಾತೇರ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ತುಮಕೂರು ವಿ. ವಿ. ಕುಲಪತಿ ಪ್ರೊ. ಎಸ್. ಸಿ. ಶರ್ಮಾ, ಕುಲಸಚಿವ ಪ್ರೊ. ಡಿ. ಶಿವಲಿಂಗಯ್ಯ ಹಾಗೂ ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಆನಂದ ಭಂತೇಜಿ ಉಪಸ್ಥಿತರಿರುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.