ಒತ್ತುವರಿ ಎಳೆ-ಎಳೆಯಾಗಿ ಬಿಡಿಸಿಡುವೆ
ತುಮಕೂರು ನಗರದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಆಸ್ತಿ ಕುರಿತಂತೆ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸುವೆ. ಒತ್ತುವರಿದಾರರ ಕೃತ್ಯವನ್ನು ಎಳೆ-ಎಳೆಯಾಗಿ ಬಿಡಿಸಿಡುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ಘೋಷಿಸಿದರು. ತುಮಕೂರು ನಗರದಲ್ಲಿ 2000 ಕೋಟಿ ರು. ಗಳಷ್ಟು ಸರ್ಕಾರಿ ಆಸ್ತಿ ಒತ್ತುವರಿಯಾಗಿದೆ. ಒತ್ತುವರಿಯಿಟ್ಟುಕೊಂಡು ಬ್ಲಾಕ್ಮೇಲ್ ನಡೆಸಲಾಗುತ್ತಿದೆ. ಈ ಕೃತ್ಯಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರ ಬೆಂಬಲವಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಣ್ಣ ಅಸಹಾಯಕತೆ ವ್ಯಕ್ತಪಡಿಸಿದ್ದು,ಅವರನ್ನು ನೋಡಿದರೆ ಅಯ್ಯೋ ಅನಿಸುತ್ತೆ ಎಂಬ ಅಭಿವೃದ್ಧಿ ರೆವೂಲ್ಯೂಷನ್ ಫೋರಂ ಅಧ್ಯಕ್ಷ ಕುಂದರನಹಳ್ಳಿ ರಮೇಶ್ ಅವರ ಆರೋಪಕ್ಕೆ ಸಚಿವ ಶಿವಣ್ಣ ಮೇಲಿನಂತೆ ಉತ್ತರಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.