ಕ್ಯಾನ್ಸರ್ ತಪಾಸಣೆ ಶಿಬಿರ
ಕ.ಪ್ರ. ವಾರ್ತೆ, ತುಮಕೂರು, ಮಾ.25
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ವೈದ್ಯರ ತಂಡ ಮತ್ತು ಸಿದ್ದಾರ್ಥ ವೈದ್ಯಕೀಯ ಕಾಲೇಜು ಸಂಯುಕ್ತಾಶ್ರಯದಲ್ಲಿ ಪಾವಗಡದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಕ್ಯಾನ್ಸರ್ ಪತ್ತೆ ಹಚ್ಚು ಶಿಬಿರದಲ್ಲಿ ಸುಮಾರು 800 ಮಹಿಳೆಯರನ್ನು ಮತ್ತು 150 ಪುರುಷರ ಕ್ಯಾನ್ಸರ್ ತಪಾಸಣೆಗೆ ನಡೆಸಲಾಯಿತು. ಇವರಲ್ಲಿ 155 ಸಂಶಯ್ಪಾದ ಕ್ಯಾನ್ಸರ್ ರೋಗಿಗಳೆಂದು ದೃಢೀಕರಿಸಿ ಲ್ಯಾಬರೋಟರಿ ಪರೀಕ್ಷೆಗಾಗಿ ಸಂಗ್ರಹ ಮಾಡಲಾಯಿತು. 25 ಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳನ್ನು ಕಂಡುಹಿಡಿಯಲಾಯಿತು. 150 ಕ್ಕೂ ಹೆಚ್ಚ ಗರ್ಭಕೋಶ ತೊಂದರೆಯುಳ್ಳ ಮಹಿಳೆಯರನ್ನು ಪರೀಕ್ಷಿಸಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲು ಸೂಚಿಸಲಾಯಿತು. ಈ ಮೇಲ್ಕಂಡ ಎಲ್ಲಾ ಫಲಾನುಭವಿಗಳಿಗೂ ಪಾವಗಡ ನಕ್ಸಲ್ ಪೀಡಿತ ಪ್ರದೇಶಾಭಿವೃದ್ಧಿ ಅನುಧಾನದಡಿಯಲ್ಲಿ ಹಾಗೂ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಡಿ.ಚನ್ನಕೇಶವ ಅವರು ಈ ಸಂದರ್ಭತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.