ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಟಿಕೆಟ್ ಯಾರಿಗಾದರೂ ಸೈ, ಕಾಂಗ್ರೆಸ್‌ಗೆ ಜೈ

Parashurama
Updated On : 25 Mar 2013, 11:13 am

ಕ.ಪ್ರ. ವಾರ್ತೆ  ತುರುವೇಕೆರೆ ಮಾ.25
ಚುನಾವಣಾ ಕಾವು ದಿನೇ ದಿನೇ ಏರ ತೊಡಗಿದೆ. ಆದರೆ ಪ್ರಮುಖ ಪಕ್ಷವಾದ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿ ಯಾರು ಎಂದು ಬಹಿರಂಗ ಪಡಿಸಿಲ್ಲ.
 ಆದರೆ ಕೆಜೆಪಿ ತನ್ನ ಅಭ್ಯರ್ಥಿಯನ್ನು ಆಖೈರುಗೊಳಿಸಿ ಅಖಾಡಕ್ಕೆ ಇಳಿಸಿದೆ. ತಮ್ಮ ಪಕ್ಷವೂ ಚುರುಕಾಗಿರಬೇಕು ಎಂದು ನಿರ್ಧರಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಪರವಾದ ರ್ಯಾಲಿ ಮಾಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲು ಪ್ರಯತ್ನಿಸಿದರು.
 ಹೌದು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಲು ಸುಮಾರು 18ಕ್ಕೂ ಹೆಚ್ಚು ಮಂದಿ ಉತ್ಸುಕರಾಗಿದ್ದಾರೆ. ಬಹುಪಾಲು ಮಂದಿ ಟಿಕೆಟ್‌ಗಾಗಿ ಲಾಭಿ ನಡೆಸಲು ಪಕ್ಷದ ವಿವಿಧ ಮುಖಂಡರ ಮನೆ ಬಾಗಿಲು ತಟ್ಟುತ್ತಿದ್ದಾರೆ. ದೆಹಲಿಯ ಮಟ್ಟಕ್ಕೂ ತೆರಳಿ ತಮ್ಮ ಪರವಾದ ಲಾಭಿಗೆ ಮುಂದಾಗಿದ್ದಾರೆ. ಈ ಮಧ್ಯೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಆತಂಕಗೊಳ್ಳಬಾರದು ಹಾಗೂ ಜಾಗೃತರಾಗಿರಬೇಕು ಎಂಬ ಕಲ್ಪನೆಯಿಂದ ಯುವ ಕಾಂಗ್ರೆಸ್ ಘಟಕ ಸೋಮವಾರ ಮುಖಂಡ ಬಿ.ಎಸ್.ವಸಂತಕುಮಾರ್ ಹಾಗೂ  ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಬಿ.ಹನುಮಂತಯ್ಯನವರ ನೇತೃತ್ವದಲ್ಲಿ ಜಾಥಾ ಏರ್ಪಡಿಸಿದ್ದರು.
 ಕಾಂಗ್ರೆಸ್ ಹಾಗೂ ಮುಖಂಡರ ಪರ  ಘೋಷಣೆ ಕೂಗುತ್ತಾ ಸಾರ್ವಜನಿಕರ ಚಿತ್ತವನ್ನು ತಮ್ಮತ್ತ ಎಳೆಯಲು ಪ್ರಯತ್ನಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಬಿಸಿಲಿನ ಝಳವನ್ನೂ ಲೆಕ್ಕಿಸದೇ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಕಾಂಗ್ರೆಸ್‌ಗೆ ಜೈ : ಮೆರವಣಿಗೆ ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡ ಬಿ.ಎಸ್. ವಸಂತಕುಮಾರ್  ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ಘೋಷಣೆ ಮಾಡುವುದು ಕೆಲ ದಿನಗಳಾಗಬಹುದು. ಆದರೆ ಕಾಂಗ್ರೆಸ್ ಕಾರ್ಯಕರ್ತರು ದೃತಿಗೆಡಬಾರದು, ಚುನಾವಣೆಯಲ್ಲಿ ಸಕ್ರಿಯರಾಗಿರಬೇಕು ಎಂಬ ಕಾರಣಕ್ಕೆ ತಾವು ಜಾಗೃತಿ ರ್ಯಾಲಿ ಮಾಡಿರುವುದಾಗಿ ಹೇಳಿದರು. ಟಿಕೆಟ್ ಯಾರಿಗಾದರೂ ಕೊಡಲಿ, ಕಾಂಗ್ರೆಸ್ ಪರವಾಗಿ ಜನರಿರಲಿ ಎಂಬ ಒಂದಂಶದ ಕಾರ್ಯಕ್ರಮವಾಗಿ ಇಂದು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮೆರವಣಿಗೆ ಮಾಡಲಾಯಿತು ಎಂದರು.
 ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಹಾಗೆಯೇ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ಸಹ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕೆಂಬ ಸಂಕಲ್ಪ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರನ್ನು ಹಾಗೂ ಪಕ್ಷದ ಕಾರ್ಯಕರ್ತರರನ್ನು ಜಾಗೃತಿಗೊಳಿಸಿದರು ಎಂದರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ  ಕೆ.ಬಿ.ಹನುಮಂತಯ್ಯ .ಯುವ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕುಮಾರ್ ಮೊದಲಾದವರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments