ರಾಜಕಾರಣಿಗಳ ಬಾಗಿಲು ಕಾಯಬೇಡಿ: ದಸಂಸ
ತಿಪಟೂರು: ತಾಲೂಕಿನ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ಕೆಲ ಪದಾಧಿಕಾರಿಗಳು ಈಗಾಗಲೆ ಕೆಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಮನೆಬಾಗಿಲು ಕಾಯುತ್ತಿರುವುದು ತಾಲೂಕು ದಸಂಸ ಗಮನಕ್ಕೆ ಬಂದಿದೆ ಎಂದು ತಾಲೂಕು ಸಂಚಾಲಕ ಮಹಾಲಿಂಗದ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ದಲಿತ ಸಂಘರ್ಷ ಸಮಿತಿ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿದ್ದು, ಆ ದೊಂಬರಾಟದಲ್ಲಿ ಗುರುತಿಸಿಕೊಂಡಿರುವವರು ತಮ್ಮ ತಪ್ಪನ್ನು ತಿದ್ದಿಕೊಳ್ಳದಿದ್ದಲ್ಲಿ ದಸಂಸ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಆದ್ದರಿಂದ ಸಮಿತಿಯ ತೀರ್ಮಾನಕ್ಕೆ ಬದ್ಧರಾಗಿರಬೇಕೆಂದು ತಾಲೂಕು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.