ಸಾರ್ವಜನಿಕ ಆಸ್ಪತ್ರೆ ಮುಂದೆ ಬಸ್ ನಿಲ್ಲಿಸಲು ಒತ್ತಾಯ
ತಿಪಟೂರು: ನಗರದ ಸಾರ್ವಜನಿಕ ಆಸ್ಪತ್ರೆಯ ಮುಂದೆ ಕೆ.ಎಸ್.ಆರ್.ಟಿ.ಸಿ. ಬಸ್ಗಳನ್ನು ನಿಲ್ಲಿಸುವ ಮೂಲಕ ಬಡ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ನಗರಸಭೆ ಸದಸ್ಯೆ ಹಾಗೂ ಜೆಡಿಎಸ್ ಮಹಿಳಾ ರಾಜ್ಯ ಕಾರ್ಯದರ್ಶಿ ರೇಖಾ ಅನೂಪ್ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹುಳಿಯಾರು, ಹಾಸನ, ಅರಸೀಕೆರೆ, ಹೊನ್ನವಳ್ಳಿ, ಚಿ.ನಾ.ಹಳ್ಳಿ, ಕಡೂರು,ಬಾಣವಾರ ಸೇರಿದಂತೆ ತಾಲೂಕಿನ ಸುತ್ತಮುತ್ತ ಗ್ರಾಮಗಳಿಂದ ರೋಗಿಗಳು ನಗರದ ಸಾರ್ವಜನಿಕ ಆಸ್ಪತ್ರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ಗಳಲ್ಲಿ ಬಂದು ಹೋಗುತ್ತಿದ್ದಾರೆ. ಆದರೆ ಈ ಬಸ್ಗಳು ಆಸ್ಪತ್ರೆಯ ಮುಂದೆ ನಿಲ್ಲದೆ ನೇರವಾಗಿ ಬಸ್ ನಿಲ್ದಾಣದಲ್ಲಿ ನಿಲ್ಲುವುದರಿಂದ ರೋಗಿಗಳು ಆಸ್ಪತ್ರೆಗೆ ಆಟೋ ರಿಕ್ಷಾದಲ್ಲಿ 25-30 ರು. ಹಣ ಕೊಟ್ಟು ಬರುವಂತಾಗಿದ್ದು, ಇದರಿಂದ ಬಡ ರೋಗಿಗಳಿಗೆ ಆರ್ಥಿಕವಾಗಿ ಹೊರೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಕೂಡಲೆ ಇತ್ತ ಗಮನಹರಿಸಿ ಸಾರ್ವಜನಿಕ ಆಸ್ಪತ್ರೆಯ ಮುಂದೆ ಬಸ್ಗಳನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ರೇಖಾ ಅನೂಪ್ ಎಚ್ಚರಿಕೆ ನೀಡಿದ್ದಾರೆ.
ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ
ತಿಪಟೂರು: ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಮಂಗಳವಾರ ಮಧ್ಯಾಹ್ನ 3ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ತಾ.ಕಾಂಗ್ರೆಸ್ ಅಧ್ಯಕ್ಷ ಬಿ.ಪರಮಶಿವಯ್ಯ ವಹಿಸಲಿದ್ದು, ಉದ್ಘಾಟನೆಯನ್ನು ಮಾಜಿ ಶಾಸಕ ಕೆ.ಷಡಕ್ಷರಿ ನೆರವೇರಿಸಲಿದ್ದಾರೆ. ಈ ಸಭೆಗೆ ತಾಲೂಕಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಾಲೂಕು ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.