ಬಿಜೆಪಿ ರಾಷ್ಟ್ರೀಯ ಮುಖಂಡರಿಗೆ ನಾನು ಆಭಾರಿ: ಬಿಎಸ್ವೈ
ತುಮಕೂರು: ಬಿಎಸ್ವೈ ಇಲ್ಲದ ಬಿಜೆಪಿ ಏನು ಅನ್ನೋದು ಮೇ 8 ರಂದು ಇಡೀ ದೇಶಕ್ಕೆ ಗೊತ್ತಾಗಲಿದೆ ಎಂದು ಸ್ವತಃ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾರ್ಮಿಕವಾಗಿ ನುಡಿದರು. ತಮ್ಮನ್ನು ಮುಖ್ಯಮಂತ್ರಿ ಪಟ್ಟದಿಂದ ಕೆಳಕ್ಕೆ ಇಳಿಸಿ ಪ್ರಾದೇಶಿಕ ಪಕ್ಷ ಕಟ್ಟಲು ಅನುವು ಮಾಡಿಕೊಟ್ಟ ಬಿಜೆಪಿ ರಾಷ್ಟ್ರೀಯ ಮುಖಂಡರಿಗೆ ಆಭಾರಿಯಾಗಿರುವುದಾಗಿ ತಿಳಿಸಿದರು. ಇನ್ನು ಮುಂದೆ ಬಿಜೆಪಿ ಕಡೆ ತಾವು ತಲೆ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಡೀವಿ ಸಿಎಂ ಮಾಡಿದ್ದು ನಾನು
ತುಮಕೂರು: ಒಕ್ಕಲಿಗ ಸಮುದಾಯದ ಡಿ.ವಿ. ಸದಾನಂದಗೌಡರನ್ನು ಮುಖ್ಯಮಂತ್ರಿ ಮಾಡಿದ ಕೀರ್ತಿ ತಮ್ಮದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಪಾದಿಸಿದರು. ಆದರೆ ಅದೇ ಸದಾನಂದಗೌಡರು ಈಗ ತಮ್ಮ ವಿರುದ್ಧ ಏನೇನು ಮಾತನಾಡುತ್ತಿದ್ದಾರೆ ಎಂಬುದು ರಾಜ್ಯಕ್ಕೆ ಗೊತ್ತಿದೆ. ಸದಾನಂದಗೌಡರ ನಿಲುವನ್ನು ಜನತೆ ತೀರ್ಮಾನ ಮಾಡಲಿ ಎಂದರು.
ಇಂದು ಮಧುಗಿರಿ ಉತ್ಸವ
ಮಧುಗಿರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ತಾಲೂಕು ಆಡಳಿತ ಮಧುಗಿರಿ, ನೆಹರು ಯುವ ಕೇಂದ್ರ ತುಮಕೂರು ಹಾಗೂ ಶುಭೋದಯ ಕಲ್ಚರಲ್, ಎಜುಕೇಷನ್ ಅಂಡ್ರೂರಲ್ ಡೆವಲೆಪ್ಮೆಂಟ್ ಟ್ರಸ್ಟ್ ವತಿಯಿಂದ ಪಟ್ಟಣದ ಮಾಲೀಮರಿಯಪ್ಪ ರಂಗಮಂದಿರದಲ್ಲಿ ಮಾ.27ರ ಸಂಜೆ ಮಧುಗಿರಿ ಉತ್ಸವ, ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ಎಂ. ನಟರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.