ಕ.ಪ್ರ. ವಾರ್ತೆ ್ಣ ಚಿಕ್ಕನಾಯಕನಹಳ್ಳಿ ್ಣ ಮಾ.29
ಮಕ್ಕಳಿಗೆ ಪಠ್ಯಪುಸ್ತಕದ ಶಿಕ್ಷಣದ ಹೊರತಾಗಿ ಸುತ್ತಮುತ್ತಲ ಪರಿಸರ ಶಿಕ್ಷಣದ ಬಗ್ಗೆ ಕಲಿಸಿದಾಗ ಮಾತ್ರ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ವಿದ್ಯಾವಾರಿಧಿ ಇಂಟರ್‌ನ್ಯಾಷನಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಎಸ್.ಕಿರಣ್‌ಕುಮಾರ್ ಕಿವಿಮಾತು ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳನ್ನು ಬರೀ ಪುಸ್ತಕ ಹುಳುಗಳನ್ನಾಗಿ ಮಾಡದೆ, ಧಾರ್ಮಿಕ, ಸಾಂಸ್ಕೃತಿಕವಾಗಿ ಎಲ್ಲಾ ರೀತಿಯ ಶಿಕ್ಷಣ ಬೋಧಿಸಬೇಕು.ಆಗ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ಶಿಕ್ಷಕರನ್ನೇ ಹೊಣೆಗಾರರನ್ನಾಗಿ ಮಾಡಬಾರದು.ಇದರಲ್ಲಿ ಪೋಷಕರ ಜವಾಬ್ದಾರಿ ಬಹಳಷ್ಟಿರುತ್ತದೆ. ಅದನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು.ಶಿಕ್ಷಣ ಪ್ರೇಮಿ ಮನೋಹರ್‌ದೇಶಮುಖ್, ಸಂಸ್ಥೆ ಕಾರ್ಯದರ್ಶಿ ಬಿ.ಕವಿತಾ, ಪ್ರಾಂಶುಪಾಲ ಟಿ.ಎಸ್.ರವಿ ಮತ್ತಿತರರು ಉಪಸ್ಥಿತರಿದ್ದರು.