ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

7 ಕ್ಷೇತ್ರದಲ್ಲಿ ಬಿಜೆಪಿ ಗೆಲವು: ಶಿವಪ್ರಸಾದ್

Rashmi Kasaragodu
Updated On : 2 May 2013, 12:10 pm

ತುಮಕೂರು: ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 7 ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸುತ್ತದೆ ಎಂಬ ವಿಶ್ವಾಸವನ್ನು ಪಕ್ಷದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ವ್ಯಕ್ತಪಡಿಸಿದರು.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ಪರ ಅಲೆ ಎದ್ದಿದೆ. ಕಳೆದ ಬಾರಿ 3 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದ್ದು ಈ ಬಾರಿ ಆ ಮೂರು ಕ್ಷೇತ್ರ ಸೇರಿದಂತೆ ಇನ್ನು ಹೆಚ್ಚುವರಿಯಾಗಿ 4 ಕ್ಷೇತ್ರಗಳಲ್ಲಿ ಜಯ ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಈಗಾಗಲೇ ಪಂಚಾಯ್ತಿ ಮಟ್ಟದಲ್ಲಿ ಪಕ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಿದ್ದೇವೆ.  ತುಮಕೂರು ಜಿಲ್ಲೆಯಲ್ಲಿ ಶೇ. 90 ರಷ್ಟು ಕಡೆ ಸರ್ಕಾರದ ಸಾಧನೆಯನ್ನು ತಿಳಿಸಿದ್ದೇವೆ. ಇದು ಈ ಚುನಾವಣೆಯಲ್ಲಿ ನೆರವಿಗೆ ಬರುತ್ತದೆ ಎಂದು ತಿಳಿಸಿದರು. ಇದೇ ತಿಂಗಳ 2 ಮತ್ತು 3 ರಂದು ಹೋಬಳಿ ಮಟ್ಟದಲ್ಲಿ ರೋಡ್ ಶೋ ನಡೆಸಲಾಗುವುದು ಎಂದು ತಿಳಿಸಿದ ಅವರು ಕೆಲವು ಕಡೆ ಅಭ್ಯರ್ಥಿಗಳೇ ರೋಡ್ ಶೋನಲ್ಲಿ ಪಾಲ್ಗೊಂಡರೆ ಮತ್ತೆ ಕೆಲವು ಕಡೆ ಜಿಲ್ಲಾ ಮಟ್ಟದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement