ಇಂದು ತಿಪಟೂರಿಗೆ ಕುಮಾರಸ್ವಾಮಿ ಭೇಟಿ
ತಿಪಟೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅಲ್ಪಸಂಖ್ಯಾತರ ನಾಯಕ ಜಮೀರ್ ಅಹಮದ್‌ರವರು ಜೆಡಿಎಸ್ ಅಭ್ಯರ್ಥಿ ಎಂ.ಲಿಂಗರಾಜು ಜಕ್ಕನಹಳ್ಳಿ ಪರ ಮತಯಾಚಿಸಲು ಮೇ 3ರಂದು ನಗರದ ಬಯಲು ರಂಗಮಂದಿರಕ್ಕೆ ಆಗಮಿಸಲಿದ್ದಾರೆಂದು ತಾಲೂಕು ಜೆಡಿಎಸ್ ಅಧ್ಯಕ್ಷ ಗುರುಮೂರ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು, ದಲಿತ ಮುಖಂಡರು ಹಾಗೂ ಅಲ್ಪಸಂಖ್ಯಾತರು ಆಗಮಿಸಬೇಕೆಂದು ಮನವಿ ಮಾಡಿದ್ದಾರೆ.