ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ: ಶ್ರೀನಿವಾಸ್
ಗುಬ್ಬಿ: ಕಳೆದ ಎರಡು ಅವಧಿಯಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದು ಚುನಾವಣೆಯಲ್ಲಿ ಹಿಂದಿನ ಸಾಧನೆಗಳು ನನಗೆ ಶ್ರೀರಕ್ಷೆಯಾಗಲಿವೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿ ಮಾತನಾಡಿದರು.
ಕ್ಷೇತ್ರದಾದ್ಯಂತ ಕುಡಿಯುವ ನೀರು, ಗ್ರಾಮೀಣ ರಸ್ತೆ, ವಿವಿಧ ವಸತಿ ಯೋಜನೆಗಳಡಿ ವಸತಿ ಸೌಲಭ್ಯ ಹಾಗೂ ಗ್ರಾಮೀಣ ಜನರ ಅಗತ್ಯ ಮೂಲಭೂತ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಿದ್ದು ಮುಂಬರುವ ದಿನಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಜೆಡಿಎಸ್ ತಾ.ಅಧ್ಯಕ್ಷ ಎಚ್.ಆರ್. ಗುರುರೇಣುಕಾರಾಧ್ಯ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ರವಿ, ಜಿ.ಪಂ.ಸದಸ್ಯ ವೈ.ಎಚ್.ಹುಚ್ಚಯ್ಯ, ತಾ.ಜೆಡಿಎಸ್ ಎಸ್‌ಸಿ ಘಟಕದ ಅಧ್ಯಕ್ಷ ಜಿ.ವಿ.ಮಂಜುನಾಥ್, ಕೆ.ಸಿ.ಕೃಷ್ಣಮೂರ್ತಿ, ಪಟ್ಟಣ ಪಂಚಾಯ್ತಿ ಸದಸ್ಯರಾದ ಜೆ.ಡಿ.ಸುರೇಶ್ ಗೌಡ, ವಿ. ರೂಪಾ, ಜಿ.ಸಿ.ನರಸಿಂಹಮೂರ್ತಿ, ಕೃಷ್ಣವೇಣಿ, ನರಸಿಂಹಮೂರ್ತಿ ಹಾಗೂ ಜೆಡಿಎಸ್ ಕಾರ್ಯದರ್ಶಿ ಎಚ್.ಡಿ.ಯಲ್ಲಪ್ಪ ಇದ್ದರು.