ಬಿಜೆಪಿಗೆ 130 ಸ್ಥಾನ: ಡೀವಿ
ಕ.ಪ್ರ.ವಾರ್ತೆ ತುಮಕೂರು ಮೇ 2
ಈ ಚುನಾವಣೆಯಲ್ಲಿ ಬಿಜೆಪಿಗೆ 130 ಸೀಟು ಲಭಿಸುತ್ತದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ವ್ಯಕ್ತಪಡಿಸಿದ್ದಾರೆ.
ಅವರು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಈಗ ಸ್ವಚ್ಛವಾಗಿದ್ದು ಹಗರಣ ಮುಕ್ತವಾಗಿದೆ. ನಾನು ನಾನು ಎಂಬುವವರೆಲ್ಲ ಪಕ್ಷ ಬಿಟ್ಟಿದ್ದು ಪಕ್ಷಕ್ಕೆ ಒಳ್ಳೆಯ ಭವಿಷ್ಯ ಇದ್ದು ಮುಂದೆಯು ಕೂಡಾ ಸರ್ಕಾರ ರಚನೆ ಮಾಡುತ್ತೇವೆ ಎಂದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ಜನತೆ ಸುರೇಶ್ ಗೌಡರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ವಿಧಾನಸೌಧ ಕ್ಕೆ ಕಳಿಸಬೇಕು ಎಂದು ಮನವಿ ಮಾಡಿದರು. ಸುರೇಶ್ಗೌಡರು 900 ಕೋಟಿ ರು. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಇಡೀ ರಾಜ್ಯದಲ್ಲೇ ಮಾದರಿಯಾಗಿದ್ದಾರೆ. ಸುರೇಶ್ಗೌಡರು ಈಗಾಗಲೇ ಜನರ ಮನಸ್ಸನ್ನು ಗೆದ್ದಿದ್ದಾರೆ ಎಂದರು.
ಉಮೇಶ್ ಗೌಡ, ಪ್ರಕಾಶ್ ಬಾಬು, ಹರೀಶ್ ರಾಘು ಸೋಮಣ್ಣ ಪ್ರಸನ್ನ ರಾಜೇಗೌಡ, ಶ್ರೀನಿವಾಸ್ ಮುಂತಾದವರು ಇದ್ದರು.