ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಅಭಿವೃದ್ಧಿಗಾಗಿ ಜೆಡಿಎಸ್‌ಗೆ ಮತ ನೀಡಿ: ವೀರಭದ್ರಯ್ಯ

Rashmi Kasaragodu
Updated On : 4 May 2013, 12:14 pm

ಕ.ಪ್ರ. ವಾರ್ತೆ   ಮಧುಗಿರಿ   ಮೇ 3
ಕ್ಷೇತ್ರದ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡಬೇಕು ಎಂದು ಜೆಡಿಎಸ್ ಅಭ್ಯರ್ಥಿ ಎಂ.ವಿ. ವೀರಭದ್ರಯ್ಯ ಕರೆ ನೀಡಿದರು.
ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಮಧುಗಿರಿ ಕ್ಷೇತ್ರದಲ್ಲಿ ಮಳೆ, ಬೆಳೆ ಇಲ್ಲದೆ ಇಲ್ಲಿನ ಜನತೆ ಭೀಕರ ಬರಗಾಲಕ್ಕೆ ತುತ್ತಾಗಿ ಶುದ್ಧ ಕುಡಿವ ನೀರಿಗೂ ಪರಿತಪಿಸುತ್ತಿದ್ದಾರೆ. ಜೀವನ ನಿರ್ವಹಣೆ ಮತ್ತಷ್ಟು ದುಬಾರಿಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನೀರಾವರಿ ಸೌಲಭ್ಯ, ನಿರುದ್ಯೋಗ ನಿವಾರಣೆ, ಅಕಶಿಲಾ ಬೆಟ್ಟವನ್ನು ಪ್ರವಾಸಿ ತಾಣ, ಗುಡಿಸಲು ಮುಕ್ತ ಕ್ಷೇತ್ರ ಸೇರಿದಂತೆ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಲು ತಮಗೆ ಮತ ನೀಡುವಂತೆ ಮನವಿ ಮಾಡಿದರು. ಮಾಜಿ ಶಾಸಕ ಗಂಗಹನುಮಯ್ಯ, ಮಾಜಿ ಅಧ್ಯಕ್ಷೆ ಕುಸುಮಾ ಜಗನ್ನಾಥ್, ಬಿ.ಎನ್. ನರಸಿಂಹಮೂರ್ತಿ, ಕೆ.ಎಸ್. ಪಾಂಡುರಂಗಾರೆಡ್ಡಿ ಇನ್ನು ಅನೇಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement