ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕಾಂಗ್ರೆಸ್ ಅಭ್ಯರ್ಥಿ ಮೇಲೆ ಹಲ್ಲೆ: ಕೆಜೆಪಿ ಕಾರ್ಯಕರ್ತರ ವಿರುದ್ಧ ಆಕ್ರೋಶ

Rashmi Kasaragodu
Updated On : 4 May 2013, 12:15 pm

ಗುಬ್ಬಿ: ಗುಬ್ಬಿ ತಾಲೂಕಿನ ಮಾವಿನಹಳ್ಳಿಯಲ್ಲಿ ಗುರುವಾರ ರಾತ್ರಿ ಪ್ರಚಾರದಲ್ಲಿ ತೊಡಗಿದ್ದ ತುರುವೇಕೆರೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ರಾಜಣ್ಣ ಮೇಲೆ ಕೆಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹಾಗೂ ಹೆಬ್ಬೂರು ರಸ್ತೆತಡೆ ನಡೆಸಿದರು. ಕೆಜೆಪಿ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಗುಬ್ಬಿ ತಾಲೂಕಿನ ಮಾವಿನಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದ ಪ್ರಚಾರ ಭಾಷಣ ನಡೆಸಿದ್ದ ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ರಾಜಣ್ಣ ಅವರ ಮೇಲೆ ಕೆಜೆಪಿ ಕಾರ್ಯಕರ್ತರು ಅಸಭ್ಯವಾಗಿ ವರ್ತಿಸಿದ್ದಲ್ಲದೆ ಗೀತಾ ರಾಜಣ್ಣ ಅವರ ವಸ್ತ್ರ ಹಿಡಿದು ಎಳೆದಾಡಿ ಅಸಭ್ಯವಾಗಿ ವರ್ತಿಸಿದರು. ನಂತರ ಹಲ್ಲೆ ಮಾಡಿದ ಈ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನೆ ನಡೆಸಿದರು.  ಹಲ್ಲೆ ಮಾಡಿದ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಗುಬ್ಬಿ ತಾಲೂಕಿನ ಸಿ.ಎಸ್.ಪುರ, ಹೆಬ್ಬೂರು ರಸ್ತೆಯಲ್ಲಿ ಧರಣಿ ಕುಳಿತು ಸುಮಾರು 2 ಗಂಟೆಕಾಲ ರಸ್ತೆ ತಡೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement