ಶಿವಲಿಂಗಯ್ಯ ಪ್ರಭಾರ ಕುಲಪತಿ
ತುಮಕೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಗಳಾಗಿ ಪ್ರೊ. ಡಿ. ಶಿವಲಿಂಗಯ್ಯ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಹಾಲಿ ಕುಲಪತಿ ಪ್ರೊ.ಎಸ್.ಸಿ.ಶರ್ಮಾ ಮೇ. 3ರಂದು ಅಧಿಕಾರಾವಧಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಕುಲಾಧಿಪತಿಗಳೂ ಆದ ರಾಜ್ಯಪಾಲ ಡಾ. ಹಂಸರಾಜ್ ಭಾರಧ್ವಾಜ್ ಆದೇಶಾನುಸಾರ ಪ್ರೊ.ಶಿವಲಿಂಗಯ್ಯ ಅವರು ಪ್ರೊ. ಶರ್ಮಾ ಅವರಿಂದ ಅಧಿಕಾರ ಸ್ವೀಕರಿಸಿದರು.