ಹಲ್ಲೆ: ದುಷ್ಕರ್ಮಿಗಳ ಪತ್ತೆಗೆ ಆಗ್ರಹ
ಶಿರಾ: ಇಲ್ಲಿನ ಪಕ್ಷೇತರ ಅಭ್ಯರ್ಥಿ ಡಿ.ಎಂ.ಈರಣ್ಣ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ತುಮಕೂರು ಸಮೀಪದ ನಂದಿ ಹಳ್ಳಿಯ ರೇಲ್ವೆ ಹಳಿ ಮೇಲೆ ಬಿಸಾಡಿ ಹೋಗಿದ್ದು, ಘಟನೆಗೆ ಸಂಬಂಧಪಟ್ಟಂತೆ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ತಾಲೂಕಿನಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಶಿರಾ ತಾಲೂಕು ಯಾದವ ಯುವ ವೇದಿಕೆ ಎಚ್ಚರಿಸಿದೆ. ಪಟ್ಟಣದಲ್ಲಿ ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ವೇದಿಕೆ ಅಧ್ಯಕ್ಷ ಸಂಪತ್ಕುಮಾರ್, ಈರಣ್ಣ ಅವರ ಸ್ಪರ್ಧೆ ಸಹಿಸಲಾಗದ ಗುಂಪೊಂದು ಹಲ್ಲೆ ನಡೆಸಿದೆ. ಈ ಘಟನೆ ಬಗ್ಗೆ ತನಿಖೆ ನಡೆಸಿ ಎಂದು ಮನವಿ ಮಾಡಿದರು.