ಕಾಂಗ್ರೆಸ್ಗೆ ಸೇರ್ಪಡೆ
ಮಧುಗಿರಿ: ಮಧುಗಿರಿ ವಿಧಾನಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಕೋರಮಂಗಲ ಮುನಿಯಪ್ಪ ಅವರ ಕಾರ್ಯವೈಖರಿಗೆ ಬೇಸತ್ತ ಕಾರ್ಯಕರ್ತರು, ಪದಾಧಿಕಾರಿಗಳು ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ನೇತೃತ್ವದಲ್ಲಿ ಬಿಎಸ್ಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು. ಪದಾಧಿಕಾರಿಗಳಾದ ಯೋಗೀಶ್, ನಾಗೇಗೌಡ, ಕೋಟೆ ಕಲ್ಲಪ್ಪ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಎಂ.ವಿ.ಗೋವಿಂದರಾಜು, ಕೆ. ಪ್ರಕಾಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ಸಮ್ಮುಖದಲ್ಲಿ ಸೇರ್ಪಡೆಯಾದರು.