ಮದ್ಯ ವಶ
ತುಮಕೂರು: ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಅಬಕಾರಿ ಇಲಾಖೆ ವತಿಯಿಂದ 1395 ವಿವಿದೆಡೆ ದಾಳಿ ನಡೆಸಿ, 77 ಮೊಕದ್ದಮೆಗಳನ್ನು ಮತ್ತು 38 ಷರತ್ತು ಉಲ್ಲಂಘನೆ ಮೊಕದ್ದಮೆಗಳನ್ನು ದಾಖಲಿಸಿ, 55 ಆರೋಪಿಗಳನ್ನು ಬಂಧಿಸಿ, 3115.550 ಲೀಟರ್ ಮದ್ಯ, 26.3330 ಲೀಟರ್ ಬಿಯರ್ ಮತ್ತು 6 ಲೀಟರ್ ಸೇಂದಿಯನ್ನು ವಶಪಡಿಸಿಕೊಂಡು 11 ವಿವಿಧ ನಮೂನೆಯ ವಾಹನಗಳನ್ನು ಜಪ್ತುಪಡಿಸಲಾಗಿದೆ. ಅಲ್ಲದೆ ತುಮಕೂರು ಜಿಲ್ಲೆಗೆ ಹೊಂದಿಕೊಂಡ ಆಂಧ್ರಪ್ರದೇಶದ ಗಡಿಭಾಗದಲ್ಲಿ ಆಂಧ್ರಪ್ರದೇಶದ ಅಬಕಾರಿ ಅಧಿಕಾರಿಗಳೊಂದಿಗೆ ಸಾಮೂಹಿಕವಾಗಿ ಜಂಟಿ ಕಾರ್ಯಾಚರಣೆ ನಡೆಸಿ, 1600 ಲೀ. ಬೆಲ್ಲದ ಕೊಳೆಯನ್ನು ನಾಶಪಡಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.