ಮತದಾನ ಮಾಡಿ ಆತ್ಮಹತ್ಯೆ
ಶಿರಾ: ಮತದಾನ ಮಾಡಿ ಬಂದು ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗೌಡಗೆರೆ ಹೋಬಳಿಯ ಬಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಯಣ್ಣ(40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಈತ ಬೆಳಗ್ಗೆ ಮತದಾನ ಮಾಡಿ ಬಂದ ನಂತರ ತನ್ನ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಈತ ಮದ್ಯಪಾನ ಮಾಡಿದ್ದ ಎನ್ನಲಾಗಿದ್ದು, ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ