ಅಪಘಾತ; ವ್ಯಕ್ತಿ ಸಾವು
ಚಾಮರಾಜನಗರ: ನಗರದಿಂದ ಸಂತೇಮರಹಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಸಂತೇಮರಹಳ್ಳಿ ಕಡೆಯಿಂದ ಬಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಚಾಮರಾಜನಗರ ಸಮೀಪದ ದೊಡ್ಡರಾಯಪೇಟೆ ತಿರುವು ಬಳಿ ಎಸ್ಪಿಎಸ್ ಬಸ್ಸಿಗೆ ಸಂತೇಮರಹಳ್ಳಿ ಕಡೆಯಿಂದ ಬಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನ ಶವವು ಆಟೋಗೆ ಅಂಟಿಕೊಂಡಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆಟೋ ಭಾಗವನ್ನು ಕತ್ತರಿಸಿ ಶವವನ್ನು ಬೇರ್ಪಡಿಸಿ, ಬೇರೊಂದು ಆಟೋದಲ್ಲಿ ಜಿಲ್ಲಾಸ್ಪತ್ರೆಗೆ ಶವ ಪರೀಕ್ಷೆಗೆ ಕಳುಹಿಸಿದರು. ಘಟನೆ ನಡೆದ ಸ್ಥಳದಲ್ಲಿ ವಾಹನ ಸಂಚಾರ ಕೆಲ ಸಮಯ ಸ್ಥಗಿತಗೊಂಡಿತ್ತು.