ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕಸಾಪ ಸಭೆಗೆ ಆಹ್ವಾನ

Rashmi Kasaragodu
Updated On : 9 May 2013, 11:54 am

ಚಿಕ್ಕನಾಯಕನಹಳ್ಳಿ: ಪಟ್ಟಣದ ಜ್ಞಾನಪೀಠ ಪ್ರೌಢಶಾಲೆಯಲ್ಲಿ ಕಸಾಪ  ಅಜೀವ ಸದಸ್ಯರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಎಂ.ಎಸ್. ರವಿಕುಮಾರ್ ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಸಾಹಿತ್ಯ ಸಮ್ಮೇನವನ್ನು ತಾಲೂಕಿನಲ್ಲಿ ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲು ಅಜೀವ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಕಸಾಪ ಜಿಲ್ಲಾಧ್ಯಕ್ಷರಾದ ಸೋ.ಮು.ಭಾಸ್ಕರಾಚಾರ್ ಅವರು ಸಭೆಯ ಉದ್ಘಾಟನೆ ಮಾಡುವರು. ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎಂ.ಎಸ್.ರವಿಕುಮಾರ್ ವಹಿಸುವರು. ಜಿಲ್ಲಾ ಸಮ್ಮೇಳನವನ್ನು ಜೂನ್ 28, 29, 30 ರಂದು ನಡೆಸಲು ಜಿಲ್ಲಾ ಸಮಿತಿ ನಿಶ್ಚಯಿಸಿದ್ದು, ಈ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲು ಎಲ್ಲಾ ಆಜೀವ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement