ಭುವನೇಶ್ವರಿ ಪ್ರೌಢಶಾಲೆಯಲ್ಲಿ ಶೇ.87.58ರಷ್ಟು ಫಲಿತಾಂಶ
ತಿಪಟೂರು: ತಾಲೂಕಿನ ಮಣಕೀಕೆರೆಯ ಭುವನೇಶ್ವರಿ ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 87.58ರಷ್ಟು ಫಲಿತಾಂಶ ಪಡೆದಿದೆ. ವಿದ್ಯಾರ್ಥಿನಿ ಕೆ.ರಮ್ಯಾ ಒಟ್ಟು 534 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಸ್ಥಾನ 5, ದ್ವಿತೀಯ ಸ್ಥಾನ 17 ಮತ್ತು ತೃತೀಯ ಸ್ಥಾನ 19 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಶಾಲೆಗೆ ಉತ್ತಮ ಫಲಿತಾಂಶ ಬರಲು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರಿಗೆ ಸಂಸ್ಥೆಯ ಕಾರ್ಯದರ್ಶಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಹೆಚ್ಚು ಅಂಕ ಪಡೆಯುವ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಟಿ.ರಂಗರಾಮು ಅಭಿನಂದನೆ ಸಲ್ಲಿಸಿದ್ದಾರೆ.