ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಗುಬ್ಬಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Rashmi Kasaragodu
Updated On : 11 May 2013, 12:40 pm

ಗುಬ್ಬಿ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರನ್ನು ಘೋಷಿಸಿದ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿದ ತಾಲೂಕು ಕುರುಬ ಸಮಾಜದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚಿದರು.
ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಮುಖ್ಯಮಂತ್ರಿಯನ್ನಾಗಿ ಘೋಷಿಸಿದ ಸುದ್ದಿ ಹರಡುತ್ತಿದ್ದಂತೆ ಕುರುಬ ಸಮಾಜದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಜಮಾಯಿಸಿ ಸಿದ್ದರಾಮಯ್ಯನವರಿಗೆ ಜಯಕಾರ ಹಾಕುತ್ತಾ ಹರ್ಷ ವ್ಯಕ್ತ ಪಡಿಸಿದರು.
 ಉತ್ತಮ ಆಡಳಿತಗಾರರು ಹಾಗೂ ಅಹಿಂದ ಸಂಘಟನೆಯ ನೇತಾರರಾದ ಸಿದ್ದರಾಮಯ್ಯನವರು ರಾಜ್ಯದ ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ಸಂತೋಷದ ಸಂಗತಿಯಾಗಿದ್ದು ರಾಜ್ಯದಲ್ಲಿ ಎಲ್ಲಾ ವರ್ಗದವರಿಗೂ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿ ಮಾದರಿ ರಾಜ್ಯವನ್ನಾಗಿಸಲಿದ್ದಾರೆಂದು ತಾಲೂಕು ಕುರುಬರ ಸಮಾಜದ ಅಧ್ಯಕ್ಷ ಎಸ್.ರಂಗನಾಥ್ ತಿಳಿಸಿದರು.
ಪ್ರಸಕ್ತ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಪಡೆದ ಕಾಂಗ್ರೆಸ್ ಪಕ್ಷ ರಾಜ್ಯ ಆಡಳಿತ ಚುಕ್ಕಾಣಿ ಹಿಡಿದಿದ್ದು ಹೈಕಮಾಂಡ್ ದಕ್ಷ ಆಡಳಿತಗಾರರಾದ ಸಿದ್ದರಾಮಯ್ಯ ಅವರನ್ನು ಮುಖ್ಯ ಮಂತ್ರಿಯನ್ನಾಗಿ ಘೋಷಿಸಿರುವುದು ಅಭಿನಂದನಾರ್ಹ ಸಂಗತಿ. ರಾಜ್ಯದ ಸಮಗ್ರ ಅಭಿವೃದ್ಧಿ ಮಹತ್ತರ ಸಾಧನೆ ಮಾಡಲಿದ್ದಾರೆಂದು ತಾಲೂಕು ಕುರುಬರ ಸಮಾಜದ ಪ್ರಧಾನ ಕಾರ್ಯದರ್ಶಿ ಎಸ್.ಎನ್.ನಿಂಗರಾಜು  ವಿಶ್ವಾಸ ವ್ಯಕ್ತಪಡಿಸಿದರು. ಈ ಸಂಭ್ರಮಾಚರಣೆಯಲ್ಲಿ ತಾಲೂಕು ಕುರುಬರ ಸಮಾಜದ ಉಪಾಧ್ಯಕ್ಷ ನಿಂಬೆಕಟ್ಟೆ ಜಯಣ್ಣ, ಕಾರ್ಯದರ್ಶಿ ಕೆಂಪಯ್ಯ, ಪದಾಧಿಕಾರಿಗಳಾದ ಮಲ್ಲೇಶ್, ಬಾಲಸುಂದರ್, ನಿಂಬೆಕಟ್ಟೆ ಲೋಕೇಶ್, ಗುಬ್ಬಿ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಎಚ್.ಲಕ್ಷ್ಮಣ್ ಗೌಡ ಸೇರಿದಂತೆ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement