ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ: ಗೌರಮ್ಮ
ತಿಪಟೂರು: ಜಾತ್ಯತೀತ ಮನೋಭಾವದಿಂದ ಕಾಂಗ್ರೆಸ್ಗೆ ಮತ ನೀಡುವ ಮೂಲಕ ಕೆ.ಷಡಕ್ಷರಿಯವರ ಗೆಲವಿಗೆ ಕಾರಣರಾದ ಎಲ್ಲ ವರ್ಗದ ಮತದಾರ ಬಂಧುಗಳು ಹಾಗೂ ಮುಖಂಡರು, ಕಾರ್ಯಕರ್ತರಿಗೆ ತಾ.ಪಂ.ಮಾಜಿ ಅಧ್ಯಕ್ಷೆ ಹಾಗೂ ತಾಲೂಕು ಮಹಿಳಾ ಕಾಂಗ್ರೆಸ್ ಮುಖಂಡರಾದ ಗೌರಮ್ಮನವರು ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರವೆಸಗಿದ್ದು, ತಾಲೂಕಿನಲ್ಲಿ ಬಿಜೆಪಿ ಶಾಸಕರನ್ನು ಸೋಲಿಸುವ ಮುಖಾಂತರ ಕಾಂಗ್ರೆಸ್ಗೆ ಗೆಲವನ್ನು ತಂದುಕೊಟ್ಟಿರುವ ಮತದಾರರಿಗೆ ನಾವೆಲ್ಲ ಚಿರಋಣಿಯಾಗಿರುತ್ತೇವೆಂದರು.
ಜನತೆಗೆ ಉತ್ತಮ ಆಡಳಿತ ನೀಡುವ ಮೂಲಕ ತಾಲೂಕಿನ ಎಲ್ಲಾ ವರ್ಗದ ಜನರ ವಿಶ್ವಾಸ ಗಳಿಸಿ, ಮಹಿಳೆಯರ, ರೈತರ, ಕಾರ್ಮಿಕರ, ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗದವರ ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ದಕ್ಷ ಹಾಗೂ ಪ್ರಾಮಾಣಿಕವಾಗಿ ನಮ್ಮ ಶಾಸಕರು ಆಡಳಿತ ನಡೆಸುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.