ಜೂನ್ 10 ರಂದು ಶಿರಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಶಿರಾ: ಶಿರಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್ 10 ರಂದು ಹಮ್ಮಿಕೊಳ್ಳಲಾಗುವುದು ಎಂದು ಪರಿಷತ್ನ ಅಧ್ಯಕ್ಷ ವೈ.ನರೇಶ್ ಬಾಬು ತಿಳಿಸಿದರು. ಪಟ್ಟಣದಲ್ಲಿ ಕಸಾಪ ಆಜೀವ ಸದಸ್ಯರ ಸಭೆ ಕರೆದು ಈ ಬಗ್ಗೆ ತೀರ್ಮಾನಿಸಲಾಗಿದೆ. ಎಲ್ಲರೂ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಕೋರಿದ್ದಾರೆ.
ಕೋಟಗುಡ್ಡ ಸಹನಾ ಶಾಲೆಗೆ ಶೇ.100 ಫಲಿತಾಂಶ
ಪಾವಗಡ: 2012-13ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾ.ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ 26 ವಿದ್ಯಾರ್ಥಿಗಳ ಪೈಕಿ 11ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಶಾಲೆಯ ಜಿ.ಎ.ಹರ್ಷಿತ (ಶೇ.93.76), ಶ್ರೀನಿವಾಸ್ (ಶೇ.93.76)ಜಿ.ಭುವನಚಂದ್ರ ಪ್ರಸಾದ್ (ಶೇ.92), ಆರ್.ರಮೇಶ್ (91.84) ಎಂ.ಆರ್.ದರ್ಶನ್ (91.84) ಎ.ಎನ್. ಸುಮನ್ (89.1)ಕೆ.ವಿಜಯ್ (88.64) ಮನ್ಮಥ (87.84)ಕೆ.ಎನ್.ನವ್ಯಶ್ರೀ (85.92) ಕೆ.ಬಜ್ಜೇಶ್ (85.6) ಇ.ಸ್ವಾತಿ (85.28)ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿ ಶಾಲೆ ಮತ್ತು ಗ್ರಾಮಕ್ಕೆ ಕೀರ್ತಿ ತಂದಿರುತ್ತಾರೆ. ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 11ವಿದ್ಯಾರ್ಥಿಗಳು ಸೇರಿದಂತೆ ಪ್ರಥಮ ದರ್ಜೆಯಲ್ಲಿ ಪಾಸಾದ 15ಮಂದಿ ವಿದ್ಯಾರ್ಥಿಗಳು ಹಾಗೂ ಮುಖ್ಯ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಯನ್ನು ಶಾಲೆಯ ಆಡಳಿತ ಮಂಡಳಿ ಅಭಿನಂದಿಸಿದೆ.
ಇಂದು ರೈತ ಸಂಪರ್ಕ ಕೇಂದ್ರ ಕಾರ್ಯನಿರ್ವಹಣೆ
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದ್ದು, ಮುಂಗಾರು ಬಿತ್ತನೆ ಪ್ರಾರಂಭವಾಗಿದೆ. ಹೀಗಾಗಿ ಮೇ 11ರ 2ನೇ ಶನಿವಾರ ಸರ್ಕಾರಿ ರಜಾ ದಿನವಾಗಿದ್ದರು ಸಹ ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜಗಳನ್ನು ಒದಗಿಸುವ ಉದ್ದೇಶದಿಂದ ಈ ನಿರ್ಣಯ ಮಾಡಲಾಗಿದ್ದು, ತೂಕಿನ ಎಲ್ಲಾ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳ ಬೇಕೆಂದು ಸಹಾಯಕ ಕೃಷಿ ನಿರ್ದೇಶಕರಾದ ಕೃಷ್ಣಪ್ಪನವರು ತಿಳಿಸಿದ್ದಾರೆ.