ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಶಿರಾ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದ ಹಿನ್ನೆಲೆಯಲ್ಲಿ ಶಿರಾದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ಕಾಳಿದಾಸ ನಗರದ ಹತ್ತಿರದಲ್ಲಿರುವ ಭಗವಾನ್ ಸರ್ಕಲ್ನಲ್ಲಿ ಬೃಹತ್ ಪ್ರಮಾಣದಲ್ಲಿ ಪಟಾಕಿಗಳನ್ನು ಸಿಡಿಸಿ ವಿಜಯೋತ್ಸವ ಆಚರಿಸಿದರು. ವಿಜಯೋತ್ಸವದಲ್ಲಿ ಮಾಜಿ ಶಾಸಕ ದಾಸಪ್ಪ, ಮುಖಂಡರಾದ ಎಸ್.ಎಲ್.ರಂಗನಾಥ್, ಡಾ.ಮಂಜುನಾಥ್, ಮತ್ತಿತರರು ಹಾಜರಿದ್ದರು.