ಸಿದ್ದು ಸಿಎಂ: ಕಾಂಗ್ರೆಸ್ ವಿಜಯೋತ್ಸವ
ತುಮಕೂರು: ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸಿದ್ಧರಾಮಯ್ಯ ಅವರ ನೇಮಕ ಆದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸಿದ್ಧರಾಮಯ್ಯ ಘೋಷಣೆಯಾಗುತ್ತಿದ್ದಂತೆ ಹರ್ಷಗೊಂಡ ಜಿಲ್ಲಾ ಕಾಂಗ್ರೆಸ್ ಮುಖಂಡರು ತುಮಕೂರಿನ ಟೌನ್ಹಾಲ್ನಲ್ಲಿ ಸಮಾವೇಶಗೊಂಡು ವಿಜಯೋತ್ಸವ ಆಚರಿಸಿದರು.
ಸಂಜೆ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ತಿನ್ನಿಸಿ ಹರ್ಷ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವುದು ಹಿಂದುಳಿದ ವರ್ಗಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದರು. ಹಿಂದುಳಿದ ವರ್ಗದ ಪ್ರಬಲ ಮುಖಂಡರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಯಾವತ್ತೂ ಸಾಮಾಜಿಕ ನ್ಯಾಯದ ಪರ ಇರುತ್ತದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿಜಯೋತ್ಸವದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಅಸ್ಲಾಂಪಾಷ, ಜಕಣಾಚಾರಿ ಇತರರು ಇದ್ದಾರೆ.