ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಖರ್ಗೆ ಮುಖ್ಯಮಂತ್ರಿ ಮಾಡಿ, ಪರಮೇಶ್ವರ್‌ಗೆ ಸೂಕ್ತ ಸ್ಥಾನ ನೀಡಿ

Rashmi Kasaragodu
Updated On : 13 May 2013, 12:18 pm

ಕ.ಪ್ರ.ವಾರ್ತೆ   ತುಮಕೂರು   ಮೇ 12
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಪಟ್ಟ ಹಾಗೂ ಡಾ. ಜಿ. ಪರಮೇಶ್ವರ್‌ಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ದಲಿತಪರ ಸಂಘಟನೆಗಳು ಭಾನುವಾನ ನಗರದಲ್ಲಿ ಪ್ರತಿಭಟನೆ ನಡೆಸಿದವು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಅಧಿಕಾರಕ್ಕೆ ಬರಲು ಶ್ರಮಿಸಿದ ಡಾ. ಜಿ. ಪರಮೇಶ್ವರ್‌ಗೆ ಸೂಕ್ತ ಸ್ಥಾನಮಾನ ನೀಡಬೇಕು. ಹಿರಿಯ ರಾಜಕಾರಣಿ, ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ದಲಿತ ಪರ ಸಂಘಟನೆಗಳು ಆಗ್ರಹಿಸಿವೆ.
ಅಲ್ಲದೆ, ದಲಿತ ಶಾಸಕರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ದಲಿತ ಪರ ಸಂಘಟನೆಗಳು ಇದೇ ಸಂದರ್ಭದಲ್ಲಿ ಒತ್ತಾಯಿಸಿವೆ.
ನಗರದ ಟೌನ್‌ಹಾಲ್ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಈ ಆಗ್ರಹ ಮಾಡಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಛಲವಾದಿ ಮಹಾಸಭಾದ ಬಿ. ಶಾಂತರಾಜು, ಕೆ.ಎಸ್. ಕೃಷ್ಣಮೂರ್ತಿ, ಎಂ. ನಿರಂಜನ, ಶಿವಪ್ರಸಾದ್, ಕೇಬಲ್ ರಘು, ರಾಘವೇಂದ್ರ ಸ್ವಾಮಿ ಎಂ.ವಿ., ಜಿ.ಎಚ್. ಸಿದ್ಧರಾಜು, ಮೋಹನ್‌ಕುಮಾರ್, ಬಾಬು ಹೆಬ್ಬಾಕ್ ಪ್ರತಿಭಟನೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement