ಸಿದ್ದರಾಮಯ್ಯಗೆ ಅಭಿನಂದನೆ
ಮೈಸೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರನ್ನು ಮಾದಿಗ ರಕ್ಷಣಾ ಮಹಾಸಭಾ ಅಭಿನಂದಿಸಿದೆ. ರಾಜ್ಯದ ಹಿಂದುಳಿದ ವರ್ಗಗಳ ನಾಯಕರಾಗಿದ್ದ ಡಿ. ದೇವರಾಜ ಅರಸು ನಂತರ ಸಿದ್ದರಾಮಯ್ಯ ಅವರು ದಲಿತ ಹಾಗೂ ಹಿಂದುಳಿದ ವರ್ಗಗಳ ಧೀಮಂತ ನಾಯಕರಾಗಿ ಹಾಗೂ ಸಜ್ಜನ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ.
ಆದಿವಾಸಿಗಳು: 22ನೇ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರನ್ನು ಹಾಗೂ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯ ಕಾಡು ಕುರುಬ ಮತ್ತು ಜೇನು ಕುರುಬ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಆರ್.ಜಿ. ಶಂಕರ್ ಅಭಿನಂದಿಸಿದ್ದಾರೆ.