ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ರಾಜವಂತಿ ಗ್ರಾಮದಲ್ಲಿ ಸಂಭ್ರಮ

Rashmi Kasaragodu
Updated On : 14 May 2013, 12:03 pm

ಪಾವಗಡ: ಅಹಿಂದ ಮುಖಂಡ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸೋಮವಾರ ತಾ.ಕಸಬಾ ವ್ಯಾಪ್ತಿಯ ರಾಜವಂತಿ ಗ್ರಾಮದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜವಂತಿ ಗ್ರಾಪಂ ವ್ಯಾಪ್ತಿಯ ಅಭಿಮಾನಿಗಳು ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಸ್‌ನಿಲ್ದಾಣದ ಬಳಿ ಸೇರಿ ಪಟಾಕಿಗಳನ್ನು ಸಿಡಿಸಿ ಸಿಹಿ ಹಂಚಿದರು. ನಂತರ ರಸ್ತೆಗಳ ಮೂಲಕ ಮೆರವಣಿಗೆ ತೆರಳಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪರ ಜೈಕಾರಗಳನ್ನು ಹಾಕಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement