20ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ
ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ಶಾಸಕರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.
ಜೂ.28 ಹಾಗು 29ರಂದು ಚಿ.ನಾ.ಹಳ್ಳಿ ತಾಲೂಕಿನಲ್ಲಿ ನಡೆಯಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಯಸಲು ಜಿಲ್ಲಾ ಸಾಹಿತ್ಯ ಪರಿಷತ್ತು ನಿಶ್ಚಯಿಸಿದ್ದು, ಅದರಂತೆ ಪೂರ್ವಭಾವಿ ಸಭೆಯನ್ನು ದಿ.20ರಂದು ಮಧ್ಯಾಹ್ನ 3 ಗಂಟೆಗೆ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕರೆಯಲಾಗಿದೆ. ಕನ್ನಡಾಸಕ್ತರು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಬೇಕಾಗಿ ಕೋರಿದೆ.