ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಬಿಸಿಎಂ ಇಲಾಖೆವತಿಯಿಂದ ನಡೆಯುತ್ತಿರುವ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2013-14ನೇ ಸಾಲಿಗೆ ವಿದ್ಯಾರ್ಥಿನಿಲಯಗಯಳಿಗೆ ಪ್ರವೇಶ ಕುರಿತು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ನಿಗದಿತ ಅರ್ಜಿ ನಮೂನೆಗಳನ್ನು ಬಿಸಿಎಂ ವಿಸ್ತರಣಾಧಿಕಾರಿಗಳು ಬಿಸಿಎಂ ಇಲಾಖೆ,ಪ್ರವಾಸಿ ಮಂದಿರದ ಹಿಂಭಾಗ ಚಿ.ನಾ.ಹಳ್ಳಿ ಇಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ಜೂನ್ 5 ಕಡೇ ದಿನ.