ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ ಅಭಿನಂದನೆ
ಶಿರಾ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವುದಕ್ಕೆ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ ಅಭಿನಂದನೆ ಸಲ್ಲಿಸಿದೆ.
ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪೋಷಕರಾದ ಡಾ.ಮಂಜುನಾಥ್, ಸಿದ್ದರಾಮಯ್ಯ ಅವರು ಹೋರಾಟದಿಂದಲೇ ಏನನ್ನಾದರು ಸಾಧಿಸಬಹುದು ಎಂಬುದನ್ನು ತಮ್ಮ ಸಾಧನೆಯಿಂದ ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಿಂದ ಬಂದಂತಹ ನೇರ ನುಡಿಯ ಪ್ರಾಮಾಣಿಕ ಪಾರದರ್ಶಕ ದಕ್ಷ ಆಡಳಿತಗಾರರಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕರ್ನಾಟಕ ಸರ್ವಾಂಗೀಣ ಅಭಿವೃದ್ಧಿ ಹೊಂದಲಿ ಎಂದು ಹೇಳಿದರು.
ಶಿರಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಟಿ.ಬಿ.ಜಯಚಂದ್ರ ಅವರಿಗೂ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಆಯ್ಕೆಯಾಗಿರುವುದಕ್ಕೆ ಸಂಘವು ಅಭಿನಂದನೆ ಸಲ್ಲಿಸಿತು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ಜಿಲ್ಲಾ ವಲಯ ಅಧ್ಯಕ್ಷ ಭಾನುಪ್ರಕಾಶ್, ತಾಲೂಕು ಘಟಕದ ಅಧ್ಯಕ್ಷ ಶಿವಕುಮಾರ್, ಕಾರ್ಯಾಧ್ಯಕ್ಷ ಧ್ರುವಕುಮಾರ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಸುರೇಶ್, ಮಂಜುನಾಥ್, ಸತೀಶ್ ಮತ್ತಿತರು ಹಾಜರಿದ್ದರು.