ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಜೂನ್ 21ರಂದು ಅದ್ಧೂರಿ ಕನ್ನಡಸಮ್ಮೇಳನ: ಚಿ.ಸೂ. ಕೃಷ್ಣಮೂರ್ತಿ

Vishwanath S
Updated On : 20 May 2013, 11:03 am

ಕ.ಪ್ರ. ವಾರ್ತೆ ,  ಮಧುಗಿರಿ ,  ಮೇ 20
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್ 21ರಂದು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ನಡೆಸಲಾಗುವುದು ಎಂದು ತಾಲೂಕು ಕಸಾಪ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ ಮತ್ತು ಪ್ರಧಾನ ಕಾರ್ಯದರ್ಶಿ ಅಮರಾವತಿ ದ್ರೇಹಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸ ಕಟ್ಟಡದಲ್ಲಿ ಕಸಾಪ ಪದಾಧಿಕಾರಿಗಳ ಪೂರ್ವಭಾವಿ ಸಭೆ ಕರೆದು ಈ ವಿಷಯ ತಿಳಿಸಿದ ಅವರು, 5ನೇ ತಾಲೂಕು ಸಾಹಿತ್ಯ ಸಮ್ಮೇಳನ ಇದಾಗಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಲೇಖಕ ಹಾಗೂ ಇತಿಹಾಸ ತಜ್ಞ ಎಂ.ಡಿ.ಶ್ರೀನಿವಾಸ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಈ ಐತಿಹಾಸಿಕ ಸಮ್ಮೇಳನಕ್ಕೆ ಖ್ಯಾತ ಸಾಹಿತಿಗಳಾದ ಹಂ.ಪ. ನಾಗರಾಜಯ್ಯ, ಕಮಲಾ ಹಂಪನಾ, ಡಾ.ದೊಡ್ಡರಂಗೇಗೌಡ, ರಾಜ್ಯ ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ, ಇನ್ನು ಅನೇಕ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.
ಶಾಸಕ ಕೆ.ಎನ್.ರಾಜಣ್ಣ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜೂನ್ 21ರ ಶುಕ್ರವಾರ ಬೆಳಿಗ್ಗೆ ಮಧುಗಿರಿಯ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ವಾಧ್ಯಗಳೊಂದಿಗೆ ಸಮ್ಮೇಳನಾಧ್ಯಕ್ಷ ಎಂ.ಡಿ.ಶ್ರೀನಿವಾಸ್ ಅವರ ಮೆರವಣಿಗೆ ನಂತರ ಸಮ್ಮೇಳನದ ಉದ್ಘಾಟನೆ,ಮಧ್ಯಾಹ್ನ ಕವಿಗೋಷ್ಠಿ ಮತ್ತು ಮಹಿಳಾ ಗೋಷ್ಠಿ ಸಂಜೆ ಸಮಾರೋಪ ಸಮಾರಂಭ ನಂತರ ವಿವಿಧ ಸಾಂಸ್ಕೃತಿಕ ರಸಸಂಜೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು, ಕನ್ನಡಾಭಿಮಾನಿಗಳು ಹಾಗೂ ಕನ್ನಡಪರ ಸಂಘಟನೆಗಳು ಎಲ್ಲ ರೀತಿಯ ಸಹಕಾರ ನೀಡುವುದರ ಮೂಲಕ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಚಿ.ಸೂ. ಕೃಷ್ಣಮೂರ್ತಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement