ಅಪಘಾತ: ವ್ಯಕ್ತಿ ಸ್ಥಳದಲ್ಲೇ ಸಾವು
ಪಾವಗಡ: ಹಿಂಬದಿಯಿಂದ ವೇಗವಾಗಿ ಬಂದ ಟೆಂಪೋ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಗುದ್ದಿದ ಪರಿಣಾಮ ಆತ ಸ್ಥಳದಲ್ಲಿಯೆ ಸಾವನ್ನಪ್ಪಿದ ಘಟನೆ ಮಂಗಳವಾರ ಶೈಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ತಿಮ್ಮರಾಯಪ್ಪ(68)ಶೈಲಾಪುರ ಗ್ರಾಮದ ರೈತ ತಿಮ್ಮರಾಯಪ್ಪ ಮಂಗಳವಾರ ಮುಂಜಾನೆ ತಮ್ಮ ಜಮೀನಿನ ಬಳಿ ಹೋಗಲು ರಸ್ತೆ ಪಕ್ಕದಲ್ಲಿ ಹೋಗುತ್ತಿರುವಾಗ ಚಳ್ಳಕೆರೆ ಕಡೆಯಿಂದ ಪಾವಗಡ ಮಾರ್ಗವಾಗಿ ಹಿಂಬದಿಯಂದ ವೇಗವಾಗಿ ಬಂದ ಟೆಂಪೋ ಆತನಿಗೆ ಗುದ್ದಿದ ಪರಿಣಾಮ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರ ಗಾಯಗಳಾಗಿ ಆತ ಸ್ಥಳದಲ್ಲಿಯೆ ಪ್ರಜ್ಞಾಹೀನಾಗಿದ್ದಾನೆ.
ಅಪಾಘಾತವನ್ನು ಕಂಡ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿ ಕೂಡಲೇ ತುರ್ತು ವಾಹನಕ್ಕೆ ಕರೆ ಮಾಡಿ ಆತನನ್ನು ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಆತನ ಸ್ಥಿತಿ ಗಂಭೀರವಾಗಿದ್ದ ಕಾರಣ ಕೂಡಲೇ ಬೆಂಗಳೂರು ನಿಮಾಸ್ಸ್‌ಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದಾರೆ. ನಿಮಾಸ್ಸ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ
ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿದ್ದಾರೆ. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೇ ಕಾರಣ ಆಸ್ಪತೆಯಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದಿದ್ದು, ಬುಧವಾರ ಶವವನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ತಂದು ಶವ ಪರೀಕ್ಷೆ ಮಾಡಲಾಯಿತು. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.