ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ಗಣೇಶ್ ತಿಳಿಸಿದ್ದಾರೆ.
ತಾಲೂಕಿನಲ್ಲಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2013-14ನೇ ಸಾಲಿಗೆ ಸೇರಬಯಸುವ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟವರ್ಗ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು 5 ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು 2013, ಜೂನ್10 ಕಡೇ ದಿನವಾಗಿರುತ್ತದೆ. ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಚಿಕ್ಕನಾಯಕನಹಳ್ಳಿ ಟೌನ್, ಬೆಳಗುಲಿ, ಬರಕನಹಾಳ್, ಹುಳಿಯಾರು, ದಸೂಡಿ, ಗುರುವಾಪುರ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ,
ಚಿ.ನಾ.ಹಳ್ಳಿ ಟೌನ್, ಹುಳಿಯಾರು ಈ ನಿಲಯಗಳಲ್ಲಿ ಅರ್ಜಿ ಸಲ್ಲಿಸಬಹುದು. ಸಂಬಂಧಿಸಿದ ವಿದ್ಯಾರ್ಥಿನಿಲಯಗಳಲ್ಲಿ ಅರ್ಜಿಫಾರಂಗಳನ್ನು ಉಚಿತವಾಗಿ ಪಡೆಯಬಹುದು. ಹಾಗೂ ಕಚೇರಿ ವೇಳೆಯಲ್ಲಿ ತಾಲೂಕು ಸಮಾಜಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು.
ಇಂದು ಲೋಕಾಯುಕ್ತರ ಭೇಟಿ
ಕೊರಟಗೆರೆ: ಇಲ್ಲಿನ ತಾ.ಪಂ. ಸಮುದಾಯ ಭವನದಲ್ಲಿ ಮೇ 23 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆ ತುಮಕೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಆಗಮಿಸಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಸ್ವೀಕರಿಸಲಿದ್ದಾರೆ.