ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕುಡಿವ ನೀರಿಗೆ ತತ್ವಾರ; ಗ್ರಾಪಂ ಕಚೇರಿಗೆ ಬೀಗ

Rashmi Kasaragodu
Updated On : 25 May 2013, 11:38 am

ಕ.ಪ್ರ.ವಾರ್ತೆ   ಕೊರಟಗೆರೆ   ಮೇ 25
ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋರಪ್ಪನಹಳ್ಳಿ ಗ್ರಾಮಕ್ಕೆ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರು ಸರಬರಾಜು ಮಾಡದ ಬಗ್ಗೆ ಬೇಸತ್ತ ಗ್ರಾಮಸ್ಥರು ತೋವಿನಕರೆ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ನಾಲ್ಕು ತಿಂಗಳಿನಿಂದ ನೀರಿನ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿಯ ಗಮನಕ್ಕೆ ತಂದರೂ ನೀರಿನ ಸಮಸ್ಯೆ ಬಗೆ ಹರಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಟ್ಯಾಂಕರ್ನಿಂದಲೂ ನೀರಿನ ಸೌಲಭ್ಯ  ಒದಗಿಸುತ್ತಿಲ್ಲ. ಇದರಿಂದ ಮಹಿಳೆಯರು ಮತ್ತು ಮಕ್ಕಳು ಹಾಗೂ ವಯೋವೃದ್ಧರು ತೀವ್ರ ತೊಂದರೆ ಪಡಬೇಕಾಗಿದೆ. ಮಾತ್ರವಲ್ಲ, ಬಟ್ಟೆ ತೊಳೆಯಲು ಸಹ ನೀರಿಲ್ಲದೆ ದುರ್ವಾಸನೆ ಬೀರುವ ಸ್ಥಿತಿ ಬಂದಿದೆ ಎಂದು ಪ್ರತಿಭಟನಾ ಸಮಯದಲ್ಲಿ ಬೋರಪ್ಪನಹಳ್ಳಿಯ ಲಕ್ಷ್ಮಮ್ಮ ಹಾಗೂ ಸಾಕಮ್ಮ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನೀರಿನ ಸಮಸ್ಯೆ ಬಗೆಹರಿಸುವ ಕಾಳಜಿಯನ್ನು ಸದಸ್ಯರಾಗಲಿ ಅಧಿಕಾರಿಗಳಾಗಲಿ ತೋರಿಲ್ಲ ಹಲವು ಸಭೆಗಳಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಸೂಚನೆ ನೀಡಿದರೂ ಗ್ರಾಪಂ ಪಿಡಿಒ ಬೇಜವಾಬ್ದಾರಿ ತನದಿಂದ ಈ ಸಮಸ್ಯೆ ಮತ್ತಷ್ಟು ಜಟಿಲಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಮರಿಯಪ್ಪ ಪ್ರತಿಭಟನಾಕಾರರ ಮನವಿ ಆಲಿಸಿ ತುರ್ತಾಗಿ ಕೊಳವೆ ಬಾವಿ ಕೊರೆಸಿ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯಿಂದ ಹಿಂದೆ ಸರಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement