ಮಡಿವಾಳ ಸಮುದಾಯ ಸಮಗ್ರ ಅಭಿವೃದ್ಧಿಗೆ ಬದ್ಧ
ಗುಬ್ಬಿ: ಆರ್ಥಿಕ,ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಮಡಿವಾಳ ಜನಾಂಗಕ್ಕೆ ಸರ್ಕಾರ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನಮಾಡಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಪಟ್ಟಣದ ಕೋಟೆ ಬೀದಿಯಲ್ಲಿ ಮಡಿವಾಳ ಮಾಚಿ ದೇವರ ದೇವಾಲಯದ ಆವರಣದಲ್ಲಿ ಮಡಿವಾಳ ಜನಾಂಗದ ವತಿಯಿಂದ ಏರ್ಪಡಿಸಿದ್ದ ಅಭಿನಂಧನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಮಡಿವಾಳ ಜನಾಂಗಕ್ಕೆ ಸಮುದಾಯ ಭವನ ಸೇರಿದಂತೆ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮಗಳಿಗೆ ಅಗತ್ಯವಿರುವ ಸೌಲಭ್ಯ ನೀಡುವುದಾಗಿ ತಿಳಿಸಿದರು. ಪಟ್ಟಣ ಪಂಚಾಯಿತಿ ಸದಸ್ಯರಾದ ಜಿ.ಡಿ.ಸುರೇಶ್ಗೌಡ,ನರಸಿಂಹಮೂರ್ತಿ, ತ್ರಿವೇಣಿ, ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಯದರ್ಶಿ ರೇಣುಕಾಪ್ರಸಾದ್, ಜಿ.ಆರ್.ಪರಮೇಶ್, ಚನ್ನಬಸವಣ್ಣ ಸೇರಿದಂತೆ ಮಡಿವಾಳ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.