ವಾಸವಿ ಜಯಂತಿ
ತುಮಕೂರು: ತುಮಕೂರಿನ ಎಸ್ಎಸ್ ಪುರಂನಲ್ಲಿರುವ ವಾಸವಿ ಸಂಘದ ಆಶ್ರಯದಲ್ಲಿ ವಾಸವಿ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎನ್.ಎಸ್. ಜಯಕುಮಾರ್ ಉದ್ಘಾಟಿಸಿದರು. ಡಾ. ಚೈತನ್ಯವರ್ಧನ್, ಅರುಣ್ಕುಮಾರ್, ಶ್ರೀನಿವಾಸ್, ಸತೀಶ್ ಇತರರು ಉಪಸ್ಥಿತರಿದ್ದರು.
ಕ್ರಮಕ್ಕೆ ಆಗ್ರಹ
ಅರಕಲಗೂಡು: ಪಟ್ಟಣದ ಎಪಿಎಂಸಿ ಆವರಣದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಗರ ಯೋಜನಾ ನಿಯಮಗಳನ್ನು ಉಲ್ಲಂಘಿಸಿ, ನಿರ್ಮಿಸಿರುವ ಗೋಡೌನ್ ಅಕ್ರಮವಾಗಿದ್ದು ಮುಂದಿನ ದಿನಗಳಲ್ಲಿ ಅಪಾಯ ತಂದೊಡ್ಡುವ ಸಾಧ್ಯತೆ ಇದ್ದು, ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣ ಪಂಚಾಯ್ತಿ ಸದಸ್ಯ ಶಶಿಕುಮಾರ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಶಶಿಕುಮಾರ್, ಎಪಿಎಂಸಿ ಆವರಣದಲ್ಲಿ ನಿರ್ಮಿಸಿರುವ ಬೃಹತ್ ಗೋಡೌನ್ಗೆ ಯಾವುದೇ ತಳಪಾಯ ಹಾಕದೇ 15ಅಡಿ ಎತ್ತರದ ಗೋಡೆ ನಿರ್ಮಿಸಲಾಗಿದೆ ಎಂದಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.