ಅಪರಿಚಿತ ವ್ಯಕ್ತಿ ಸಾವು
ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿ ಕೊನೇಹಳ್ಳಿಯ ರಾಷ್ಟ್ರೀಯ ಹೆದ್ದಾರಿ 206ರ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಮಾರು 40-45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು, ಶವವನ್ನು ತಿಪಟೂರಿನ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇದುವರೆವಿಗೂ ಸಾವನ್ನಪ್ಪಿದ ವ್ಯಕ್ತಿಯ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಶವದ ಬಗ್ಗೆ ಮಾಹಿತಿ ತಿಳಿದಲ್ಲಿ ಕೂಡಲೇ ಹೊನ್ನವಳ್ಳಿ ಪೊಲೀಸ್ ಠಾಣಾ ದೂ.ಸಂಖ್ಯೆ 08134-264710,254100 ಅಥವಾ ಮೊ.9480802968 ಸಂಪರ್ಕಿಸಬೇಕೆಂದು ಪಿಎಸ್ಐ ತಿಳಿಸಿದ್ದಾರೆ.