ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬಿಸಿಎಂ ವಿದ್ಯಾರ್ಥಿ ನಿಲಯಗಳಿಗೆ ಆಹ್ವಾನ

Rashmi Kasaragodu
Updated On : 31 May 2013, 12:00 pm

ತಿಪಟೂರು: ತಾಲೂಕಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖಾ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಆಶ್ರಮ ಶಾಲೆಗಳು ಮತ್ತು ಅನುದಾನಿತ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖಾಧಿಕಾರಿ ಬಾನು ತಿಳಿಸಿದ್ದಾರೆ. ಇಲಾಖಾ ವಿದ್ಯಾರ್ಥಿನಿಯಗಳಾದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ತಿಪಟೂರು, ಬಾಲಕರ ವಿದ್ಯಾರ್ಥಿನಿಲಯ ತಿಪಟೂರು, ಬಳುವನೇರಲು, ಕೋಟನಾಯಕನಹಳ್ಳಿ, ಬಿಳಿಗೆರೆ ಹಾಗೂ ಆಶ್ರಮ ಶಾಲೆಗಳಾದ ತಾಲೂಕಿನ ಬೆನ್ನಾಯಕನಹಳ್ಳಿ ಗೊಲ್ಲರಹಟ್ಟಿ, ಖಾಸಗಿ ವಿದ್ಯಾರ್ಥಿನಿಲಯಗಳಾದ ಹಾಲ್ಕುರಿಕೆ, ಕಲ್ಲುಶೆಟ್ಟಿಹಳ್ಳಿ,ನೊಣವಿನಕೆರೆ ಈ ವಿದ್ಯಾರ್ಥಿನಿಲಯಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.  ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಸರ್ಕಾರದಿಂದ ನಡೆಯುತ್ತಿರುವ ಮತ್ತು ಸರ್ಕಾರದಿಂದ ಅಂಗೀಕೃತವಾದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹಾಗೂ ಅನುದಾನಿತ ಖಾಸಗಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಆಶ್ರಮ ಶಾಲೆಗಳಿಗೆ ಸೇರಬಯಸುವ ಪ.ಜಾತಿ, ಪ.ವರ್ಗ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು. ಅನುತ್ತೀರ್ಣ  ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರಾಗಿರುವುದಿಲ್ಲ. ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ನಮೂನೆಗಳನ್ನು ತಿಪಟೂರು ತಾಲೂಕು ಹಿಂದುಳಿದ ಕಲ್ಯಾಣ ಇಲಾಖೆ ಅಥವಾ ವಿದ್ಯಾರ್ಥಿ ನಿಲಯಗಳಿಂದ ಉಚಿತವಾಗಿ ಪಡೆದು ಅರ್ಜಿಯೊಂದಿಗೆ ಆದಾಯ ಪ್ರಮಾಣ  ಪತ್ರ, ಶಾಲೆಯ ಪ್ರವೇಶ ಪತ್ರ, ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರಗಳನ್ನು ಜೂ.6ರೊಳಗೆ ನಿಲಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಹಿಂದುಳಿದ ವರ್ಗದ ಇಲಾಖೆಯನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement