ತುಮಕೂರಿಗೆ ಇಂದು ಸಿಎಂ ಸಿದ್ದರಾಮಯ್ಯ
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು ಜಿಲ್ಲೆಯಲ್ಲಿ ಜೂ.1 ರಂದು ಪ್ರವಾಸ ಕೈಗೊಳ್ಳಲಿದ್ದಾರೆ. 1 ರಂದು ಬೆಳಿಗ್ಗೆ 11.30 ಕ್ಕೆ ತುಮಕೂರಿನ ಸಿದ್ದಗಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಬಿರ್ಲಾ ಸಭಾಂಗಣದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಹಣಕಾಸು ವಿತ್ತೀಯ ಸೇವೆಗಳ ಇಲಾಖೆ ಮತ್ತು ಯುನಿಕ್ ಐಡೆಂಟಿಫಿಕೇಷನ್ ಅಥಾರಿಟಿ ಆಫ್ ಇಂಡಿಯಾ ಇವರ ಸಹಯೋಗದಿಂದ ಆಯೋಜಿಸಿರುವ ಎಲ್ಪಿಜಿ ಬಳಕೆದಾರರಿಗೆ ಪ್ರಯೋಜನದ ನೇರ ವರ್ಗಾವಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 12.45 ಗಂಟೆಗೆ ತುಮಕೂರಿನಿಂದ ಬೆಂಗಳೂರಿಗೆ ತೆರಳುವರು.