ನಾಳೆ ವಿವಿಧ ಕಟ್ಟಡ ಉದ್ಘಾಟನೆ
ಕೊರಟಗೆರೆ: ತಾಲೂಕಿನ ಗೊರವನಹಳ್ಳಿಯ ಮಹಾಲಕ್ಷ್ಮೀ ವಿದ್ಯಾ ಮಂದಿರದ ಶಾಲಾ ಕಟ್ಟಡ, ವಾಣಿಜ್ಯ ಮಳಿಗೆ ಮತ್ತು ವಸತಿ ಸಮುಚ್ಚಯ ಕಮಲಮ್ಮ ಧ್ಯಾನ ಮಂದಿರ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಜೂ.2 ರಂದು ಬೆಳಗ್ಗೆ 11 ಗಂಟೆಗೆ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವೀರೇಶಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಎಂ.ಆರ್. ನರಸೀಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ, ಮಹಾಲಕ್ಷ್ಮೀ ವಿದ್ಯಾ ಮಂದಿರದ ಶಾಲಾ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ನೆರವೇರಿಸಲಿದ್ದಾರೆ.
ವಾಣಿಜ್ಯ ಮಳಿಗೆಗಳ ಉದ್ಘಾಟನೆಯನ್ನು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ನೆರವೇರಿಸಲಿದ್ದಾರೆ,ಕೊರಟಗೆರೆಯ ನೂತನ ಶಾಸಕ ಪಿ.ಆರ್.ಸುಧಾಕರ್ಲಾಲ್ ವಸತಿ ಸಮುಚ್ಚಯ ಉದ್ಘಾಟಿಸಲಿದ್ದಾರೆ.
ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಧ್ಯಾನ ಮಂದಿರದ ಕಟ್ಟಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಲ್ಸಿ ಡಾ.ಎಂ.ಆರ್. ಹುಲಿನಾಯ್ಕರ್, ಜಿ.ಪಂ.ಅಧ್ಯಕ್ಷೆ ಪ್ರೇಮಾ ಮಹಲಿಂಗಪ್ಪ ಸಿಇಓ ಗೋವಿಂದರಾಜು ಮಧುಗಿರಿ ಉಪ ವಿಭಾಗಾಧಿಕಾರಿ ಸಿ.ಅನಿತಾ, ಮಧುಗಿರಿ ಸಾ.ಶಿ.ಇಲಾಖೆ ಉಪನಿರ್ದೇಶಕ ಟಿ.ಎಸ್. ಅಂಜಿನಪ್ಪ, ಟಿ.ಡಿ.ಪ್ರಸನ್ನ ಕುಮಾರ್, ದಾಕ್ಷಾಯಿಣಿ ರಾಜಣ್ಣ, ಅನಿತ, ರಾಮಚಂದ್ರಪ್ಪ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು