ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

25ರಂದು ಲಕ್ಷ ದೀಪೋತ್ಸವ, ಧಾರ್ಮಿಕ ಕಾರ್ಯಕ್ರಮ

Srinivasa Murthy VN
Updated On : 23 Nov 2013, 1:11 am

ಗುಬ್ಬಿ: ತಾಲೂಕಿನ ಸಿ.ಎಸ್. ಪುರ ಹೋಬಳಿ ಅಂಕಳಕೊಪ್ಪ ಮಜರೆ ವೀರಣ್ಣನಗುಡಿ ಶ್ರೀ ಭದ್ರಕಾಳಿ ಸಮೇತ ವೀರಭದ್ರಸ್ವಾಮಿ ಪುಣ್ಯಕ್ಷೇತ್ರದಲ್ಲಿ ನ.25ರಂದು ಕಾರ್ತಿಕ ಮಾಸದ ಅಂಗವಾಗಿ ಲಕ್ಷ ದೀಪೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಲಕ್ಷ ದೀಪೋತ್ಸವದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಕಳಶ ಸ್ಥಾಪನೆ, ಪುಣ್ಯಹ, ಗಣಪತಿ ಪೂಜೆ, ಹೋಮ, ಗಂಗಾ ಪೂಜೆ, ಮೂಲದೇವರ ಪ್ರಾರ್ಥನೆ, ಸ್ವಸ್ತಿವಾಚನ ನಾಂದಿ ಪೂಜೆ, ಭದ್ರಕಾಳಿ ಅಮ್ಮನವರಿಗೆ ವೀರಭದ್ರಸ್ವಾಮಿಗೆ ಮಹಾಭಿಷೇಕ, ಗಣಪತಿ ಹೋಮ, ನವಗ್ರಹ ಹೋಮ, ನಕ್ಷತ್ರ ಹೋಮ, ಸಂವತ್ಸರ ಹೋಮ, ಪೂರ್ಣಾಹುತಿ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಅಷ್ಟವಧಾನ ಸೇವೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆಯಲಿವೆ.
ಸಂಜೆ 6 ಗಂಟೆಗೆ ಐತಿಹಾಸಿಕ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಲಾಗುತ್ತದೆ.
ಲಕ್ಷ ದೀಪೋತ್ಸವದ ಸಾನ್ನಿಧ್ಯವನ್ನು ಸಿದ್ದರಬೆಟ್ಟ ಬಾಳೆಹೊನ್ನೂರು ಶಾಖಾ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್. ಬಸವರಾಜು, ಶಾಸಕ ಎಂ.ಟಿ. ಕೃಷ್ಣಪ್ಪ, ಕೆಎಸ್‌ಐಡಿಸಿ ವ್ಯವಸ್ಥಾಪಕ ಡಾ. ಸಿ. ಸೋಮಶೇಖರ್ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಭಕ್ತಾದಿಗಳು ಭಾಗವಹಿಸಲಿದ್ದಾರೆಂದು ವೀರಭದ್ರಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎಂ.ವಿ. ಬಸವರಾಜು, ಕಾರ್ಯದರ್ಶಿ ಟಿ.ಎನ್. ಶಿವರುದ್ರಯ್ಯ ತಿಳಿಸಿದ್ದಾರೆ.
ಈ ಬಾರಿ 12 ಲಕ್ಷ ವೆಚ್ಚದಲ್ಲಿ ಬೆಳ್ಳಿ ಪಲ್ಲಕ್ಕಿಯನ್ನು ನಿರ್ಮಿಸಲಾಗಿದ್ದು ಲಕ್ಷ ದೀಪೋತ್ಸವದ ಅಂಗವಾಗಿ ಭದ್ರಕಾಳಿ ಸಮೇತ ವೀರಭದ್ರಸ್ವಾಮಿ ಅವರನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement