ಕೆಪಿಸಿಸಿ ಅಧ್ಯಕ್ಷರ ಸಲಹೆ ಮೇರೆಗೆ ಆಯ್ಕೆ
ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಕೊಂಡವಾಡಿ ಚಂದ್ರಶೇಖರ್ ಆಯ್ಕೆಯಾಗುವುದು ಖಚಿತ ಎಂದು ಮಧುಗಿರಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಮಂಗಳವಾರ ಬೆಳಗ್ಗೆಯೇ ಭವಿಷ್ಯ ನುಡಿದಿದ್ದರು.
ಅವರು ಸುದ್ದಗಾರರೊಂದಿಗೆ ಮಾತನಾಡಿ, ಕೊಂಡವಾಡಿ ಚಂದ್ರಶೇಖರ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರ ಕ್ಷೇತ್ರಕ್ಕೆ ಸಂಬಂಧಿಸಿದವರು. ಡಾ. ಜಿ.ಪರಮೇಶ್ವರ್ ಕೊಂಡವಾಡಿ ಅವರನ್ನು ಆಯ್ಕೆ ಮಾಡುವಂತೆ ಸಲಹೆ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷರ ಮಾತನ್ನು ಮೀರುವ ಹಾಗಿಲ್ಲ. ಅಧ್ಯಕ್ಷರ ಸಲಹೆಯ ಮೇರೆಗೆ ಕೊಂಡವಾಡಿ ಚಂದ್ರಶೇಖರ್ ಅವರನ್ನು ಬೆಂಬಲಿಸಲಾಗಿದೆ ಎಂದು ಕೆಎನ್ಆರ್ ತಿಳಿಸಿದ್ದರು. ಹಾಲು ಒಕ್ಕೂಟದ ಅದ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಕೆ.ಎನ್. ರಾಜಣ್ಣ ಪಕ್ಷದ ಅನುಮತಿ ಪಡೆದು ಬೆಳಗಾವಿ ಅಧಿವೇಶನದಿಂದ ಬಂದಿದ್ದರು.