ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬಾಲ್ಯವಿವಾಹದಿಂದ ದೈಹಿಕ, ಮಾನಸಿಕ ದುಷ್ಪರಿಣಾಮ

Rashmi Kasaragodu
Updated On : 27 Nov 2013, 1:58 am

ತಿಪಟೂರು: ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗು, ಅದು ನಡೆಯದಂತೆ ಸಮಾಜದ ಎಲ್ಲರೂ ಶ್ರಮಿಸಬೇಕೆಂದು ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ನಂದಕುಮಾರ್ ತಿಳಿಸಿದರು.
ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಕೆ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಬಾಲ್ಯವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯನ್ನು  ಉದ್ಘಾಟಿಸಿ ಮಾತನಾಡಿದ ಅವರು ಪ್ರೌಢಶಾಲೆ ಹಂತದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮೂಲಕ ಬಾಲ್ಯವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಇಂತಹ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸುತ್ತಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ಆರ್.ಸ್ವಾಮಿ ಮಾತನಾಡಿ ಬಾಲ್ಯ ವಿವಾಹಗಳಿಂದಾಗಿ ದೈಹಿಕ, ಮಾನಸಿಕ, ಸಾಮಾಜಿಕ ದುಷ್ಪರಿಣಾಮಗಳುಂಟಾಗಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ತೊಡಕಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ವಿದ್ಯಾರ್ಥಿಗಳ ಹಂತದಲ್ಲಿ ಅರಿವು ಮೂಡಿಸುವ ಕೆಲಸಗಳಾಗಬೇಕೆಂದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಕಾಂತರಾಜು ಅಧ್ಯಕ್ಷತೆ ವಹಿಸಿ ಬಾಲ್ಯವಿವಾಹ ನಿಷೇಧದಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು. ಸಿಡಿಪಿಓ ಪಿ. ಓಂಕಾರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ತುರುವೇಕೆರೆ ಸಿಡಿಪಿಓ ರವೀಂದ್ರ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement